ದಯಾನಂದ್ ಸಸ್ಪೆನ್ಷನ್ ಆರ್ಡರ್ ಸರಿ ಇದೆ – ಕೇಂದ್ರ ಸರ್ಕಾರ ಅನುಮೋದನೆ!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳಿಗೆ ಶಾಕ್ ಎದುರಾಗಿದೆ. ಮೂವರು ಐಪಿಎಸ್ ಅಧಿಕಾರಿಗಳಾದ ಬಿ. ದಯಾನಂದ್, ವಿಕಾಸ್ ಕುಮಾರ್ ವಿಕಾಸ್ ಮತ್ತು ಶೇಖರ್ ಹೆಚ್. ಟೆಕ್ಕನವರ್ ಅಮಾನತು ಆದೇಶವನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆ ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ್​, ವಿಕಾಸ್ ಕುಮಾರ್ ಮತ್ತು ಶೇಖರ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.

ಇದನ್ನೂ ಓದಿ : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕಣ್ಮುಚ್ಚಿದ ಮತ್ತೊಂದು ಹುಲಿ! 

 

Btv Kannada
Author: Btv Kannada

Read More