ಮಂಡ್ಯ : ರೈತರ ಜೀವನಾಡಿಯಾದ ಕೆಆರ್‌ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ. 124.80 ಗರಿಷ್ಟ ಅಡಿ ಎತ್ತರದ KRS ಡ್ಯಾಂ ಸಂಪೂರ್ಣ ಭರ್ತಿಯಾಗಿರುವ ಸಂಭ್ರಮದ ಅಂಗವಾಗಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.
ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ, ಜಲಾಶಯ ಜೂನ್‌ನಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸ ಹೆಚ್ಚಿಸಿದೆ.
- ಗರಿಷ್ಟ ಮಟ್ಟ – 124.80 ಅಡಿ
- ಪ್ರಸ್ತುತ ನೀರಿನ ಮಟ್ಟ – 124.80 ಅಡಿ
- ಒಳ ಹರಿವು – 46501 ಕ್ಯೂಸೆಕ್
- ಹೊರ ಹರಿವು – 21463 ಕ್ಯೂಸೆಕ್
- ಪ್ರಸ್ತುತ ನೀರಿನ ಸಂಗ್ರಹ – 49.452TMC
- ಗರಿಷ್ಟ ನೀರಿನ ಸಂಗ್ರಹ – 49.50 TMC
ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಸಿಎಂ ಗೆ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ನಾಯಕರು ಸಾಥ್ ಕೊಡಲಿದ್ದಾರೆ.
ಇದನ್ನೂ ಓದಿ : ಬೂಕರ್ ವಿಜೇತೆ ಬಾನು ಮುಷ್ತಾಕ್ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ!
