ಬೆಂಗಳೂರಿನ 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇಂದು ಕರೆಂಟ್‌ ಕಟ್‌.. ಎಲ್ಲೆಲ್ಲಿ?

ಬೆಂಗಳೂರು : ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು (ಜೂನ್ 30) ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಕಡಿತ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಮಯದಲ್ಲಿ ತುಸು ಬದಲಾವಣೆ ಇರಬಹುದು ಎಂದು ಬೆಸ್ಕಾಂ ತಿಳಿಸಿದೆ.

ತುರ್ತು ವಿದ್ಯುತ್ ಕಾಮಗಾರಿಗಳನ್ನು ಕೈಗೊಂಡ ಹಿನ್ನೆಲೆ ಜಯನಗರ, ಹೆಣ್ಣೂರು ಸುತ್ತಮುತ್ತ 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್‌ ಕಡಿತವಾಗಲಿದೆ.

ವಿದ್ಯುತ್‌ ಕಡಿತವಾಗುವ ಪ್ರದೇಶಗಳು : “ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೆನ್‌ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶ.

ಜಯನಗರ, ಕನಕಪುರ ರಸ್ತೆ ವ್ಯಾಪ್ತಿಯಲ್ಲೂ ವಿದ್ಯುತ್‌ ಕಡಿತ : 66/11ಕೆ.ವಿ ಪ್ರೇಸ್ಟೀಜ್ ಫಾಲ್ಕನ್ ಸಿಟಿ ಜಯನಗರ ವಿಭಾಗ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಬೆಳಗ್ಗೆ10:00 ಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಫೋರಮ್ ಮಾಲ್, ಗಂಗಪತಿಪುರ, ಪ್ರೇಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮೇನ್ ರೋಡ್, ನಾರಾಯಣ ನಗರ 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಸುಪ್ರಜಾ ನಗರ, ಜೆ ಎಸ್ ಎಸ್ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾಧರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಆಶಂತಿ ಶಾಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕೆಇ ಕೆರೆ, ಸಾರಕ್ಕೆ ಸಿಗ್ನಲ್, ನಾಗಾರ್ಜುನ ಪ್ರೀಮಿಯರ್ ಅಪಾರ್ಟ್‌ಮೆಂಟ್‌, ಚೊಂಚನಗಟ್ಟ ವಿಲೇಜ್, ಶ್ರೀನಿಧಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಇರುವುದಿಲ್ಲ.

ಇದನ್ನೂ ಓದಿ : KPCC ಸೋಶಿಯಲ್ ಮೀಡಿಯಾ ವಿಭಾಗ ಮುಖ್ಯಸ್ಥರಾಗಿ ಐಶ್ವರ್ಯ ಮಹದೇವ್ ನೇಮಕ!

Btv Kannada
Author: Btv Kannada

Read More