ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಈ ಮೂಲಕ ವಿ.ಸೋಮಣ್ಣರ ಬಿಜೆಪಿ ಅಧ್ಯಕ್ಷ ಕುರ್ಚಿ ಕನಸಿಗೆ ಪ್ರಾರಂಭದಲ್ಲೇ ವಿಘ್ನ ಎದುರಾದಂತಾಗಿದೆ.
ಹೌದು.. ವಿ.ಸೋಮಣ್ಣರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದ್ರೆ ಪಕ್ಷ ಸರ್ವನಾಶ ಆಗುತ್ತದೆ ಎಂದು ನಾಯಕರ ವಾರ್ನಿಂಗ್ ನೀಡಿದ್ದಾರೆ. ವಿ.ಸೋಮಣ್ಣ ವಿರುದ್ಧ ರಾಜ್ಯ ಬಿಜೆಪಿಯ ಹಲವು ಮುಖಂಡರು ಆಕ್ರೋಶ ಹೊರಹಾಕಿದ್ದು, ರಾಜ್ಯ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಅವರು ನೇರಾನೇರ ಎಚ್ಚರಿಕೆ ನೀಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಅವರು, ವಿ.ಸೋಮಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ರೆ ಸೂಡೈಡ್ ಮಾಡಿಕೊಳ್ತೇನೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೆ ಎಚ್ಚರಿಸಿದ್ದಾರೆ.
ಅಧಿಕಾರಕ್ಕಾಗಿ ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷನಾಗಿ ಮಾಡಬೇಡಿ. ವಿ.ಸೋಮಣ್ಣ ರಾಜ್ಯಾಧ್ಯಕ್ಷ ಮಾಡಿದ್ರೆ ಅಸಂಖ್ಯಾತ ಕಾರ್ಯಕರ್ತರಿಗೆ ಅಪಮಾನವಾಗುತ್ತದೆ. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸೋತ ನಂತರ ಅಪಮಾನ ಮಾಡಿದ್ದಾರೆ. ಒಂದೊಂದು ಮತಕ್ಕೂ 2 ಸಾವಿರ ನೀಡಿ ಭ್ರಷ್ಟಾಚಾರಿಗಳನ್ನಾಗಿ ಮಾಡಿದ್ದಾರೆ. ಯಡಿಯೂರಪ್ಪ ವಿಜಯೇಂದ್ರ ಬಗ್ಗೆ ಮಾತಾಡಿದ್ದೇ ಸೋಮಣ್ಣ ಸೋಲಿಗೆ ಕಾರಣವಾಗಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕರ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ – ಇಂದು ಸುರ್ಜೇವಾಲ ಬೆಂಗಳೂರಿಗೆ!
