ಜುಲೈ 2ರಂದು ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಅವರ 47ನೇ ಜನ್ಮದಿನ. ಹುಟ್ಟುಹಬ್ಬಕ್ಕೂ ಮುನ್ನ ಗಣೇಶ್ ಹೊಸ ಲುಕ್ನಲ್ಲಿ ಪೋಸ್ ಕೊಟ್ಟು ಅಭಿಮಾನಿಗಳಿಗಾಗಿ ಫೋಟೋಸ್ ಶೇರ್ ಮಾಡಿದ್ದಾರೆ. ಇನ್ನು ಈ ಬಾರಿ ಫ್ಯಾನ್ಸ್ ಜೊತೆ ಗಣೇಶ್ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಳ್ತಾ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಹುಟ್ಟುಹಬ್ಬದಂದು ಮನೆಯಲ್ಲಿ ಇರೋದಿಲ್ಲ. ಯಾರೂ ಮನೆ ಹತ್ತಿರ ಬರಬೇಡಿ. ಬದಲಾಗಿ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿ, ಅದೇ ನನಗೆ ಕೊಡುವ ಉಡುಗೊರೆ ಎಂದಿದ್ದಾರೆ. ಹೀಗಾಗಿ ಈ ಬಾರಿ ಗಣೇಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.
ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಸಿನಿಮಾದ ಚಿತ್ರೀಕರಣಕ್ಕಾಗಿ ಬೇರೆ ಊರಿನಲ್ಲಿರುವ ಕಾರಣಕ್ಕೆ ಗಣೇಶ್ ಅಭಿಮಾನಿಗಳಿಗೆ ಮನೆ ಹತ್ರ ಬರಬೇಡಿ ಎಂದಿದ್ದಾರೆ. `ಕೃಷ್ಣಂ ಪ್ರಣಯ ಸಖಿ’ ಚಿತ್ರದ ಯಶಸ್ಸಿನ ಬಳಿಕ ಗಣೇಶ್ ಚಿತ್ರಗಳಿಗೆ ಮತ್ತೆ ಪುಷ್ಠಿ ಸಿಕ್ಕಿದ್ದು ಬಲು ಬೇಡಿಕೆ ಹೊಂದಿದ್ದಾರೆ. ಹೀಗಾಗಿ ಈ ವರ್ಷದಲ್ಲಿ ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಚಿತ್ರವನ್ನ ತೆರೆಗೆ ತರಲು ಪ್ರಯತ್ನಸುತ್ತಿರುವ ಗಣೇಶ್ ನಿರಂತರ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರಂತೆ.
ಆದರೆ ಈ ಬಾರಿಯ ಹುಟ್ಟುಹಬ್ಬಕ್ಕೆ ಗಣೇಶ್ ಅವರು ಅಭಿಮಾನಿಗಳಿಗಾಗಿ ವಿಶೇಷ ಉಡುಗೊರೆ ನೀಡಿದ್ದಾರೆ. ಹವ್ಯಾಸಿ ಛಾಯಾಗ್ರಾಹಕ ಹಾಗೂ ಪ್ರಸ್ತುತ ಶಿಲ್ಪ ಗಣೇಶ್ ಅವರು ನಿರ್ಮಾಣ ಮಾಡುತ್ತಿರುವ ತುಳು ಚಿತ್ರದ ನಾಯಕ ನಿತ್ಯಪ್ರಕಾಶ್ ಬಂಟ್ವಾಳ ಅವರು ಸೆರೆ ಹಿಡಿದಿರುವ ಗಣೇಶ್ ಅವರ ವಿಶೇಷ ಭಾವಚಿತ್ರಗಳನ್ನು ತಮ್ಮ ಹುಟ್ಟುಹಬ್ಬದ ಗಣೇಶ್ ಅವರು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಸ್ಪೆಷಲ್ ಫೋಟೋಸ್ ಶೇರ್ ಮಾಡಿ ಫ್ಯಾನ್ಸ್ಗೆ ಬರ್ತ್ಡೇ ಗಿಫ್ಟ್ ಕೊಟ್ಟ ಗೋಲ್ಡನ್ ಸ್ಟಾರ್!
