ಬೆಂಗಳೂರು : ಕಾಮಗಾರಿಗೆ ಗ್ರೀನ್ ಸಿಗ್ನಲ್ ನೀಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ಬಿಬಿಎಂಪಿ AEE ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಬೇಗೂರು ಸಬ್ ಡಿವಿಷನ್ AEE ನೀಲಕಂಠಯ್ಯ ಟ್ರ್ಯಾಪ್ ಆದ ಭ್ರಷ್ಟ ಅಧಿಕಾರಿ.
ನೀಲಕಂಠಯ್ಯ ಜೊತೆ ಗುತ್ತಿಗೆದಾರ ರಕ್ಷಿತ್ ಯಾದವ್ ಕೂಡ ಬಲೆಗೆ ಬಿದ್ದಿದ್ದಾನೆ. ಸದ್ಯ ಇಬ್ಬರನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. AEE ನೀಲಕಂಠಯ್ಯ ಹಾಗೂ ಗುತ್ತಿಗೆದಾರ ರಕ್ಷಿತ್ ಯಾದವ್ ಕಾಮಗಾರಿಗೆ ಒಪ್ಪಿಗೆ ನೀಡಲು 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಲಂಚಕ್ಕೆ ಡಿಮ್ಯಾಂಡ್ ಇಟ್ಟ ಹಿನ್ನಲೆ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ನಿನ್ನೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರು ಆರೋಗಳು ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ – ವೈದ್ಯ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
Author: Btv Kannada
Post Views: 1,594







