ಕರ್ಣಾಟಕ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪಣೀಂದ್ರ ಕೆ.ಜಿ. ನೇಮಕ!

ಮಂಗಳೂರು : ಅಖಿಲ ಭಾರತ ಕರ್ಣಾಟಕ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪಣೀಂದ್ರ ಕೆ.ಜಿ. ಅವರನ್ನು ನೇಮಕ ಮಾಡಲಾಗಿದೆ.

ಮಂಗಳೂರಿನ ಸಂಘ ನಿಕೇತನದಲ್ಲಿ ಜೂನ್ 28 ಮತ್ತು 29ರಂದು ನಡೆದ ಅಖಿಲ ಭಾರತ ಕರ್ಣಾಟಕ ಬ್ಯಾಂಕ್ ಉದ್ಯೋಗಿಗಳ ಸಂಘ ದ(ಎಐಕೆಬಿಇಎ) 26ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪಣೀಂದ್ರ ಕೆ.ಜಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

1,600 ಕ್ಕೂ ಹೆಚ್ಚು ಪ್ರತಿನಿಧಿಗಳು, ವೀಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮ್ಮೇಳನವನ್ನು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ. ಎಚ್. ವೆಂಕಟಾಚಲಂ ಉದ್ಘಾಟಿಸಿದರು. ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಇಒ ಶ್ರೀ ಕೃಷ್ಣನ್ ಎಚ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಇದನ್ನೂ ಓದಿ : ರಾಜ್ಯ ಸರ್ಕಾರ ಡಿಸೆಂಬರ್​​​​​​​ 31 ದಾಟಲ್ಲ.. ಪತನವಾಗುತ್ತೆ – ಗೋವಿಂದ ಕಾರಜೋಳ ಭವಿಷ್ಯ!

Btv Kannada
Author: Btv Kannada

Read More