ಬೆಂಗಳೂರು : ವಿದೇಶಗಳಲ್ಲಿ ಬಾಡಿಗೆಗೆ ಬಾಯ್ ಫ್ರೆಂಡ್ ಮತ್ತು ಗರ್ಲ್‌ಫ್ರೆಂಡ್ ಸಿಗೋದನ್ನ ಕೇಳಿರುತ್ತೀರಿ ಆದ್ರೆ ಇದೀಗ ಸಿಲಿಕಾನ್ ಸಿಟಿಯಲ್ಲೂ ಅಂತಹ ಕರ್ಲ್ಚರ್ ಆರಂಭವಾಗಿದ್ಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಬೆಂಗಳೂರಿನಲ್ಲಿ ವ್ಯಾಲೆಂಟೈನ್‌ಗೆ ಬಾಯ್ ಫ್ರೆಂಡ್ ಬೇಕಾ? ಎಂದು ಕಿಡಿಗೇಡಿಗಳು ಪೋಸ್ಟರ್ ಅಂಟಿಸಿರುವ ಘಟನೆ ನಡೆದಿದೆ.
ನಗರದಲ್ಲಿ ಎಲ್ಲರೂ ಪ್ರೇಮಿಗಳ ದಿನದ ಸಂಭ್ರಮದಲ್ಲಿರುವಾಗ ಈ ರೀತಿಯ ವಿಚಿತ್ರ ಪೋಸ್ಟರ್ ನೋಡಿ ಜನರು ಶಾಕ್ ಆಗಿದ್ದಾರೆ. “RENT A BOY FRIEND ONLY 389/ SCAN ME” ಹೀಗೆಂದು ಪೋಸ್ಟರ್ ಅಂಟಿಸಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ಈ ರೀತಿಯ ಪೋಸ್ಟರ್ಗಳು ಕಂಡು ಬಂದಿದ್ದು. ಜಯನಗರ, ಬನಶಂಕರಿ, ಬಿಡಿಎ ಕಾಂಪ್ಲೇಕ್ಸ್ಗಳ ಬಳಿ ‘ವ್ಯಾಲೆಂಟೆನ್ಸ್ ಡೇಗೆ ಹುಡುಗ ಬೇಕಾದ್ರೆ ಕೇವಲ ರೂ 389/- ಕೊಟ್ರೆ ಸಾಕು ಒಂದು ದಿನದ ಬಾಯ್ ಫ್ರೆಂಡ್ ಸಿಗಲಿದ್ದಾನೆ ಎಂದು ಬರೆದಿರುವ ಪೋಸ್ಟರ್ಗಳು ಕಂಡು ಬಂದಿವೆ.

ಆದರೆ ಈ QR ಕೋಡ್ ಸ್ಕ್ಯಾನ್ ಮಾಡಿದ್ರೆ ಗೆಳೆಯ ಸಿಗಲ್ಲ. ಇದೊಂದು ಮಾರ್ಕೆಟಿಂಗ್ ತಂತ್ರಗಾರಿಕೆ. ಪ್ರೇಮಿಗಳ ದಿನವನ್ನು ಬಂಡವಾಳವನ್ನಾಗಿಸಿಕೊಂಡ ಕಿಡಿಗೇಡಿಗಳು ಈ ರೀತಿಯ ಪೋಸ್ಟರ್ ಅಂಟಿಸುತ್ತಿದ್ದಾರೆ. ಒಂದು ವೇಳೆ QR ಕೋಡ್ ಸ್ಕ್ಯಾನ್ ಮಾಡಿದ್ರೆ, ಹೆಣ್ಮಕ್ಕಳಿಗೆ ಬೇಕಾಗಿರುವ ಬ್ಯೂಟಿ ಪ್ರಾಡೆಕ್ಟ್ಗಳ ಕುರಿತು ಮಾಹಿತಿ ಸಿಗಲಿದೆ.
ಈ ವಿಚಿತ್ರ ಪೋಸ್ಟರ್ಗಳನ್ನು ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ಪೋಸ್ಟರ್ ಅಂಟಿಸುವ ಮೂಲಕ ದುಷ್ಟರು ನಗರದ ಸಂಸ್ಕೃತಿ ಹಾಳು ಮಾಡಲು ಹೊರಟಿದ್ದಾರೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಟ್ವಿಟರ್ ಎಕ್ಸ್‌ನಲ್ಲಿ ಟ್ಯಾಗ್ ಮಾಡಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : http://‘ನಾನು ಹೈದರಾಬಾದ್ನವಳು ಎಂದ ರಶ್ಮಿಕಾ’ – ನ್ಯಾಷನಲ್ ಕ್ರಶ್ ಮೇಲೆ ಕನ್ನಡಿಗರು ಗರಂ!







