ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬಾಗಲಕೋಟೆ : ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು65 ವರ್ಷದ ಶಿವನಿಂಗಪ್ಪ ಹೊನ್ನಪ್ಪನವರ್ ಎಂದು ಗುರುತಿಸಲಾಗಿದೆ. ಬೈಕ್‌ನ ಹಿಂಬದಿ ಕುಳಿತಿದ್ದ ಅವರ ಪತ್ನಿ ಬಾಳವ್ವ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಮಖಂಡಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಓಂಪ್ರಕಾಶ್ ರಾವ್ ನಿರ್ದೇಶನದ “ಫೀನಿಕ್ಸ್” ಹಾಗೂ “ಗೆರಿಲ್ಲಾ ವಾರ್” ಚಿತ್ರಗಳಿಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಸಂಗೀತ!

Btv Kannada
Author: Btv Kannada

Read More