ಚಿಕ್ಕಬಳ್ಳಾಪುರ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರು ನಾಮಕರಣ ಮಾಡಲಾಗಿದೆ.
ಇನ್ನು 3,400 ಕೋಟಿ ರೂ. ಮೊತ್ತದ ಆಡಳಿತಾತ್ಮಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ಕುಡಿಯುವ ನೀರು ಯೋಜನೆಗೆ 23,251 ಕೋಟಿ ವೆಚ್ಚಕ್ಕೆ ಸರ್ಕಾರ ಮುಂದಾಗಿದೆ. ಇದುವರೆಗೆ 17,147 ಕೋಟಿ ವೆಚ್ಚವಾಗಿದ್ದು, ಹೆಚ್ಚುವರಿಯಾಗಿ 6,103 ಕೋಟಿ ಖರ್ಚಿಗೆ ಸರ್ಕಾರ ಮುಂದಾಗಿದೆ.
ಚಿಂತಾಮಣಿಯಲ್ಲಿ ಮೊರಾರ್ಜಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಯೋಜನೆ ಪೂರ್ಣಕ್ಕೆ ಸರ್ಕಾರ ಉದ್ದೇಶಿಸಿದೆ. ಇನ್ನು ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು ಗ್ರಾಮಾಂತರ ಇನ್ನು ಬೆಂಗಳೂರು ಉತ್ತರ ಜಿಲ್ಲೆ – ಸಚಿವ ಸಂಪುಟ ನಿರ್ಧಾರ!
