ಬೆಂಗಳೂರು : ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದಾಗಿ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಭಾರೀ ಮಳೆಯಾಗುತ್ತಿರುವ ಕಾರಣ ರಾಜ್ಯದ 3 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕೊಡಗಿನ ಶಾಲಾ ಕಾಲೇಜಿಗೆ ಇಂದು(ಜು.03) ರಜೆ ಘೋಷಿಸಿದ್ದರೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡದ ಕೆಲ ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.
ಚಿಕ್ಕಮಗಳೂರಿನಲ್ಲಿ ರಜೆ ಘೋಷಣೆ : ಚಿಕ್ಕಮಗಳೂರಿನ ಕೆಲ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಎನ್ಆರ್ ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನು ತಾಲುಕಿನ ಕೆಲ ಹೊಬಳಿಗಳಾದ ಆಲ್ದೂರು, ವಸ್ತಾರೆ, ಜಾಗರ, ಖಾಂಡ್ಯ ಹೊಬಳಿಗೂ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲೂ ಶಾಲಾ ಕಾಲೇಜಿಗೆ ರಜೆ : ಕೊಡಗು ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದ ಪರಿಣಾಮ ಶಾಲಾ ಕಾಲೇಜಗಳು ಆರಂಭಗೊಂಡಿತ್ತು. ಆದರೆ ಇದೀಗ ಮತ್ತೆ ಮಳೆ ಆರಂಭಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ದಾಂಡೇಲಿ, ಜೋಯಿಡಾ ತಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರಜೆ ಘೋಷಿಸಿದ್ದಾರೆ. ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಆಂಗ್ಲರ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಅಬ್ಬರ.. ಶತಕ ಸಿಡಿಸಿ ಮಿಂಚಿದ ನಾಯಕ ಗಿಲ್!







