ಬೆಂಗಳೂರಲ್ಲಿ ‘ಕಾಫಿ’ ವಿಚಾರಕ್ಕೂ ಮಾರಾಮಾರಿ.. ಎಕ್ಸ್​​​ಟ್ರಾ ಕಾಫಿ ಕಪ್‌ ಕೊಡದಿದ್ದಕ್ಕೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

ಬೆಂಗಳೂರು : ಎಕ್ಸ್​​​ಟ್ರಾ ಕಾಫಿ ಕಪ್‌ ಕೊಡದಿದ್ದಕ್ಕೆ ಸಿಬ್ಬಂದಿಗೆ ನಾಲ್ವರು ಕಿಡಿಗೇಡಿಗಳು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಶೇಷಾದ್ರಿಪುರಂನ ನಮ್ಮ ಫಿಲ್ಟರ್ ಕಾಫಿ ಶಾಪ್‌ನಲ್ಲಿ ನಡೆದಿದೆ.

ಬುಧವಾರ ಸಂಜೆ 6:50ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಫಿ ಶಾಪ್‌ಗೆ ಬಂದಿದ್ದ ನಾಲ್ವರು ಕಾಫಿಯನ್ನು ಕೊಂಡು ಮತ್ತೊಂದು ಕಪ್‌ ಕೇಳಿದ್ದಾರೆ. ಈ ವೇಳೆ, ಹೋಟೆಲ್‌ ಸಿಬ್ಬಂದಿ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ನಾಲ್ವರು, ಹೋಟೆಲ್‌ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಪಾಳಕ್ಕೆ ಹೊಡೆದು, ಮುಖಕ್ಕೆ ಗುದ್ದಿ, ಕಾಲಿನಿಂದ ಹೊಟ್ಟೆಗೆ ಒದ್ದು ವಿಕೃತಿ ಮೆರೆದಿದ್ದಾರೆ. ಶೇಷಾದ್ರಿಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಳಿಕ ತಡರಾತ್ರಿ ಮಾಲೀಕ ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿಯಿಂದ ದಾಂಧಲೆ – ನಂದಿನಿ ಪಾರ್ಲರ್‌ಗೆ ನುಗ್ಗಿ ಮಾಲೀಕನ ಮೇಲೆ ಹಲ್ಲೆ.. ವಸ್ತುಗಳೆಲ್ಲಾ ಪೀಸ್ ಪೀಸ್!

Btv Kannada
Author: Btv Kannada

Read More