ಧಾರವಾಡ : ಧಾರವಾಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನಿ ಅವರು ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಿತರಾಗಿದ್ದಕ್ಕಾಗಿ ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು. ಎಎಸ್ಪಿ ನಾರಾಯಣ ಭರಮನಿ ಅವರು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ಎಎಸ್ಪಿ ನಾರಾಯಣ ಭರಮನಿ ಪ್ರತಿಕ್ರಿಯಿಸಿ, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ ಎಂದಿದ್ದಾರೆ.
ಮೇಲಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ಸಿಎಂ ಹಾಗೂ ಗೃಹ ಸಚಿವರು ಮಾತನಾಡಿದ್ದಾರೆ. ಮುಂದಿನ ನಿರ್ಧಾರ ಸರ್ಕಾರ ಕೈಗೊಳ್ಳುತ್ತದೆ. ಈಗ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಧಾರವಾಡ ಎಎಸ್ ಪಿ ನಾರಾಯಣ ವಿ. ಭರಮನಿ ಅವರಿಗೆ ಹೊಡೆಯಲು ಕೈ ಎತ್ತಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಎಎಸ್ಪಿ ನಾರಾಯಣ ಭರಮನಿ ಸ್ವಯಂ ರಾಜೀನಾಮೆ ನೀಡಲು ಮುಂದಾಗಿದ್ದರು. ವಿಆರ್‌ಎಸ್ ತೆಗೆದುಕೊಳ್ಳಲು ನಿರ್ಧರಿಸಿದ್ದ ಎನ್.ವಿ ಭರಮನಿ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ವಾಪಸ್ ಪಡೆದು ಕೆಲಸ ಮುಂದುವರೆಸುವಂತೆ ಹೇಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕನ್ನಡ ನಾಡು, ನುಡಿ ಹೆಸರಲ್ಲಿ ಕೋಟಿ ಕೋಟಿ ದೋಚಿದ್ರಾ ಕಸಾಪ ಅಧ್ಯಕ್ಷ? – ತನಿಖೆಗೆ ಆದೇಶ.. ಜೈಲಿಗೆ ಹೋಗ್ತಾರಾ ಮಹೇಶ್ ಜೋಷಿ?
