ಬೈಕ್‌-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ.. ಪೊಲೀಸ್​​​ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ದಾವಣಗೆರೆ : ಬೈಕ್‌ಗೆ ಟ್ರ್ಯಾಕ್ಟರ್‌ ಡಿಕ್ಕಿಯಾದ ಪರಿಣಾಮ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್‌ನಲ್ಲಿ ನಡೆದಿದೆ. ಎಸ್‌ಪಿ ಕಚೇರಿಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎ.ಗುರುಮೂರ್ತಿ(49) ಮೃತ ದುರ್ದೈವಿ.

ಗುರುಮೂರ್ತಿಯವರು ಎಸ್‌ಪಿ ಕಚೇರಿಯಲ್ಲಿ ಡ್ಯೂಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸಂಗೊಳ್ಳಿ ರಾಯಣ್ಣ ಫ್ಲೈ  ಓವರ್ ಮೇಲೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಟ್ರ್ಯಾಕ್ಟರ್‌, ಬೈಕ್‌ಗೆ ಡಿಕ್ಕಿಯಾಗಿದೆ.

ಗಂಭೀರ ಗಾಯಗೊಂಡಿದ್ದ ಗುರುಮೂರ್ತಿಯವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಆಸ್ಪತ್ರೆಗೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಗುರುಮೂರ್ತಿ ಅವರನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ : ಆನ್‌ಲೈನ್ ಬೆಟ್ಟಿಂಗ್ ಚಟ.. ಸಾಲ ಮಾಡಿ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾದ ಯುವಕ!

Btv Kannada
Author: Btv Kannada

Read More