ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಬರ್ತ್​ಡೇಗೆ ‘ಮಾಫಿಯಾ’ ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಮಾಫಿಯಾ” ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರಲಿದೆ.


ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಎಚ್ ನಿರ್ದೇಶಿಸಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಹಾಗೂ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ದೇವರಾಜ್ ಅವರು ಸಹ “ಮಾಫಿಯಾ” ಚಿತ್ರದಲ್ಲಿ ಅಭಿನಯಿಸಿದ್ದು, ತಂದೆ – ಮಗ ಇಬ್ಬರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ “ಮಾಫಿಯಾ” ಚಿತ್ರದಲ್ಲಿ ಮೈನವಿರೇಳಿಸುವ ಆಕ್ಷನ್ ಸನ್ನಿವೇಶಗಳಿದೆ. ಚಿತ್ರ ಬಿಡುಗಡೆಗಾಗಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ “ಮಾಫಿಯಾ” ಚಿತ್ರಕ್ಕಿದೆ.

ಇದನ್ನೂ ಓದಿ : ರಣಭೀಕರ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶ – 63 ಮಂದಿ ಸಾವು.. 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿಪಾಸ್ತಿ ನಷ್ಟ! 

Btv Kannada
Author: Btv Kannada

Read More