ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ತನ್ನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ FIR ರದ್ದು ಕೋರಿ ಬಿಜೆಪಿ MLC ಎನ್. ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು.
ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, MLC ಎನ್. ರವಿಕುಮಾರ್ಗೆ ಬಂಧನದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜುಲೈ 8ರವರೆಗೆ ಬಂಧಿಸೋದು ಬೇಡ ಎಂದ ಹೈಕೋರ್ಟ್ ಹೇಳಿದೆ. ಹಾಗೆಯೇ ಜುಲೈ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಅರ್ಜಿದಾರ ರವಿಕುಮಾರ್ಗೆ ಸೂಚನೆ ನೀಡಿದೆ.
MLC ಎನ್. ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದು, ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರು ಈ ಆದೇಶ ನೀಡಿದ್ದಾರೆ. ಈ ಮೂಲಕ ಮತ್ತೆ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ರವಿಕುಮಾರ್ ವಿರುದ್ಧ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ಎಂಬವರು ವಿಧಾನಸೌಧದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರ ಮೇಲೆ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್.. ಶೀಘ್ರವೇ ಹೆಬ್ಬಾಳ ಫ್ಲೈಓವರ್ ಸಂಚಾರಕ್ಕೆ ಮುಕ್ತ!
