ಬೆಂಗಳೂರು : ನಿನ್ನೆ (ಶುಕ್ರವಾರ) ಮುಂಜಾನೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್ಪೋರ್ಟ್ನಲ್ಲೇ ನಿಲ್ಲಿಸಲಾಯಿತು.
ಏರ್ ಇಂಡಿಯಾ ಪೈಲಟ್ ಅನಾರೋಗ್ಯದಿಂದಾಗಿ ನಿನ್ನೆ (ಜುಲೈ 4) ಬೆಳಿಗ್ಗೆ ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ ವಿಮಾನಕ್ಕೆ ಸ್ವಲ್ಪ ಅಡಚಣೆ ಉಂಟಾಗಿದೆ. ವಿಮಾನ ಟೇಕ್ ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ಪೈಲಟ್ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೂಲಗಳ ಪ್ರಕಾರ, ಬೆಂಗಳೂರಿನಿಂದ ದೆಹಲಿಗೆ AI2414 ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಬದಲು ಬೇರೆ ಪೈಲಟ್ ನಿಯೋಜನೆ ಮಾಡಿದ ನಂತರ ವಿಮಾನ ಹಾರಾಟ ನಡೆಸಲಾಯಿತು.
ಈ ಅನಿರೀಕ್ಷಿತ ಘಟನೆಯಿಂದಾಗಿ, ಪ್ರಯಾಣಿಕರು ಸ್ವಲ್ಪ ತಡವಾಗಿ ದೆಹಲಿಯನ್ನು ತಲುಪಿದ್ದಾರೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ದೃಢಪಡಿಸಿದೆ. ಪೈಲಟ್ ಈಗ ಸ್ಥಿರ ಸ್ಥಿತಿಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು!
