ಪಾಟ್ನಾ : ಬಿಹಾರದ ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕ, ಹೆಸರಾಂತ ಉದ್ಯಮಿ ಗೋಪಾಲ್ ಖೇಮ್ಕಾ ಮೇಲೆ ಮಧ್ಯರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಗೋಪಾಲ್ ಖೇಮ್ಕಾ ಅವರನ್ನು ಮನೆಯ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದೆ.
ಗಾಂಧಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ಪನಾಚೆ ಹೋಟೆಲ್ ಪಕ್ಕದಲ್ಲಿರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಖೇಮ್ಕಾ ಅವರು ವಾಸಿಸುತ್ತಿದ್ದರು. ಅವರು ಮನೆ ಕಡೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಖೇಮ್ಕಾ ತಲೆಗೆ ಗುಂಡು ತಗುಲಿದ ಪರಿಣಾಮ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಒಂದು ಗುಂಡನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಘಟನೆ ಸಂಬಂಧ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಕೃತ್ಯದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಹಿಂದೆ ಅಂದರೆ 2018 ಡಿಸೆಂಬರ್ 20 ರಂದು ಗೋಪಾಲ್ ಖೇಮ್ಕಾ ಅವರ ಮಗ ಗುಂಜನ್ ಖೇಮ್ಕಾ ಮೇಲೆ ಹಾಜಿಪುರ ಕೈಗಾರಿಕಾ ಪ್ರದೇಶದಲ್ಲಿ ಗುಂಡಿ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದೀಗ ಬರೋಬ್ಬರಿ 7 ವರ್ಷಗಳ ಬಳಿಕ ಈಗ ತಂದೆಯ ಉಸಿರನ್ನು ಕೂಡ ನಿಲ್ಲಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿಂದ ದೆಹಲಿಗೆ ಹೊರಟಿದ್ದ AIR INDIA ವಿಮಾನದಲ್ಲಿ ಕುಸಿದು ಬಿದ್ದ ಪೈಲಟ್!
