ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್​​​ ರೇಡ್ – ಐವರು ಮಹಿಳೆಯರ ರಕ್ಷಣೆ‌.. 8 ಮಂದಿ ಅರೆಸ್ಟ್​!

ಹುಬ್ಬಳ್ಳಿ : ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಭೇದಿಸುವಲ್ಲಿ ಹುಬ್ಬಳ್ಳಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹೊರ ರಾಜ್ಯಗಳ ಹಾಗೂ ವಿದೇಶದ 5 ಮಹಿಳೆಯರನ್ನು ರಕ್ಷಿಸಲಾಗಿದ್ದು, ಹೋಟಲ್‌ ಮ್ಯಾನೇಜರ್ ಗಣೇಶ್, ಹರೀಶ್, ಮಹೇಶ್, ಈಶ್ವರ್, ಭಾಸ್ಕರ್ ಸೇರಿ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಕಾನೂನುಬಾಹಿರ ಅಕ್ರಮ ಮೊಂಸ ದಂಧೆಯು ಪ್ರತಿಷ್ಠಿತ ಕಾಲೇಜುಗಳ ಅಕ್ಕಪಕ್ಕದಲ್ಲೇ ರಹಸ್ಯವಾಗಿ ನಡೆಯುತ್ತಿತ್ತು ಎಂಬುದು ತಿಳಿದು ಹುಬ್ಬಳ್ಳಿಯ ಜನತೆಯೇ ಬೆಚ್ಚಿ ಬಿದ್ದಿದ್ದಾರೆ.

ಪೊಲೀಸರ ದಾಳಿಯ ಸಂದರ್ಭದಲ್ಲಿ, ಮಹಿಳೆಯರನ್ನು ಲಾಡ್ಜ್ ಸ್ನಾನ ಕೋಣೆಯಿಂದ ರಹಸ್ಯ ಕೋಣೆಗೆ ಕೊಂಡೊಯ್ಯಲಾಗಿತ್ತು. ಆದರೆ, ಪೊಲೀಸರು ರಹಸ್ಯ ಕೋಣೆಯ ಪ್ರವೇಶ ದ್ವಾರವನ್ನು ತೆರೆದು ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಈ ಜಾಲವು ಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನಾ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ.

ಇದನ್ನೂ ಓದಿ : ಬಿಜೆಪಿ ನಾಯಕ ಗೋಪಾಲ್ ಖೇಮ್ಕಾರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು!

Btv Kannada
Author: Btv Kannada

Read More