ಬೆಳಗಾವಿ : ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಹಾಸನ, ಶಿವಮೊಗ್ಗ, ವಿಜಯಪುರದಲ್ಲಿ ಹಾರ್ಟ್ ಅಟ್ಯಾಕ್ ಸಂಬಂಧಿಸಿದ ಘಟನೆಗಳು ಹೆಚ್ಚಾಗಿ ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕರ್ತವ್ಯ ನಿರತ ಎಎಸ್ಐ ಮೀರಾ ನಾಯಕ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.
ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆ ASI ಎಲ್.ಜೆ. ಮೀರಾ ನಾಯಕ ಹಾರ್ಟ್ ಅಟ್ಯಾಕ್ನಿಂದ ನಿಧನ ಹೊಂದಿದ್ದಾರೆ. ಗೋಕಾಕ ಮಹಾಲಕ್ಷ್ಮಿದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮೀರಾ ನಾಯಕರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ನಗರದ ಎಸ್‌ಸಿ-ಎಸ್‌ಟಿ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯ ಹೂಡಿದ್ದರು.
ಆದರೆ ಇಂದು ಬೆಳಗ್ಗೆ 6 ಗಂಟೆಗೆ ಮೀರಾ ನಾಯಕರಿಗೆ ಏಕಾಏಕಿ ಎದೆ ನೋವು ಕಾಣಿಸಿದ್ದು, ತೀವ್ರ ಹೃದಯಾಘಾತದಿಂದ ಜೀವ ಬಿಟ್ಟಿದ್ದಾರೆ. ಸದ್ಯ ಎಎಸ್‌ಐ ಮೀರಾ ನಾಯಕ ಮೃತದೇಹವನ್ನು ಗೋಕಾಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ : ಬೈಕ್ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಬಸ್.. ಸ್ಥಳದಲ್ಲೇ ಜೀವ ಚೆಲ್ಲಿದ ಸವಾರ!
