ಮಂಗಳೂರು : ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ನ ಪುತ್ರ ಕೃಷ್ಣ ರಾವ್ ಎಂಬಾತನ ವಿರುದ್ಧ ಲವ್, ಸೆಕ್ಸ್, ದೋಖಾ ಪ್ರಕರಣ ದಾಖಲಾಗಿತ್ತು. ಸಹಪಾಠಿ ಯುವತಿಯನ್ನು ನಂಬಿಸಿ ಗರ್ಭಿಣಿ ಮಾಡಿದ್ದ, ನಂತರ ಕೃಷ್ಣ ರಾವ್ ಆಕೆಯನ್ನು ಮದುವೆಯಾಗಲು ನಿರಾಕರಿಸಿ ಪರಾರಿಯಾಗಿದ್ದ. ಇದೀಗ ಮೈಸೂರಿನ ಟಿ.ನರಸಿಪುರ ಬಳಿ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸಂತ್ರಸ್ತ ಯುವತಿ ಗರ್ಭಿಣಿಯಾದ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
10 ದಿನಗಳಿಂದ ತಲೆಮರೆಸಿಕೊಂಡಿದ್ದ ಕೃಷ್ಣ ರಾವ್ ಕೊನೆಗೂ ಲಾಕ್ ಆಗಿದ್ದು, ಆರೋಪಿಯನ್ನು ಪೊಲೀಸರು ಇಂದು ಸಂಜೆಯೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ನಿಲ್ಲದ ಹಾರ್ಟ್ಅಟ್ಯಾಕ್ ದುರಂತ – ಬೆಳಗಾವಿಯಲ್ಲಿ ಕರ್ತವ್ಯ ನಿರತ ASI ಹೃದಯಾಘಾತದಿಂದ ನಿಧನ!

Author: Btv Kannada
Post Views: 1,807