ಇಂದು ಸಿಎಂ ಕಾರ್ಯಕ್ರಮಗಳಿಗೆ ಬ್ರೇಕ್.. ಇಡೀ ದಿನ ಮನೆಯಲ್ಲೇ ಸಿದ್ದರಾಮಯ್ಯ ವಿಶ್ರಾಂತಿ!

ಬೆಂಗಳೂರು : ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ಹೋಗಿದ್ದರು.

ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಹಾಗೂ ಎಂಆರ್‌ಐ ಸ್ಕ್ಯಾನ್ ಮಾಡಲಾಗಿತ್ತು. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರ ಮಾಹಿತಿ ನೀಡಿದ್ದರು. ಇಂದು ಸಿದ್ದರಾಮಯ್ಯನವರು ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದ್ದು, ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ನಾಳೆ ಅವರು ದೆಹಲಿಗೆ ತೆರಳಲಿದ್ದಾರೆ.

ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದು, ಮೈಸೂರಿನ ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆಗೆ ಸಂಬಂಧಪಟ್ಟಂತೆ ರಕ್ಷಣಾ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಕಳೆದ ದಸರಾದಲ್ಲೂ ವೈಮಾನಿಕ ಪ್ರದರ್ಶನ ಆಯೋಜನೆಗೆ ಪ್ರಯತ್ನಗಳು ನಡೆದಿದ್ದವು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೇವಲ ಹೆಲಿಕಾಪ್ಟರ್‌ ಮತ್ತು ಪ್ಯಾರಾಗ್ಲೈಡಿಂಗ್‌ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಸಂದರ್ಭದಲ್ಲಿ ಏರ್‌ಶೋ ಆಯೋಜಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ಬಾರಿ ಕೂಡ ಪ್ರಯತ್ನ ಮುಂದುವರೆಸಿದ್ದಾರೆ. ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಸಂಜೆ 4.30ಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಹೈಕಮಾಂಡ್ ಭೇಟಿ : ​ದೆಹಲಿಗೆ ಭೇಟಿ ನೀಡುವ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿಯವರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಬೇರೆ ಹೆಣ್ಣಿನ ಸಹವಾಸ, ಪತ್ನಿಗೆ ವರದಕ್ಷಿಣೆ ಕಿರುಕುಳ – ಐಎಸ್‍ಡಿ ಡಿವೈಎಸ್‌ಪಿ ಶಂಕರಪ್ಪ ವಿರುದ್ಧ FIR!

Btv Kannada
Author: Btv Kannada

Read More