ಅಮೆರಿಕದಲ್ಲಿ ಭೀಕರ ಅಪಘಾತ.. ಪ್ರವಾಸಕ್ಕೆ ಹೋಗಿದ್ದ ಭಾರತ ಮೂಲದ ನಾಲ್ವರು ಸಜೀವ ದಹನ!

ವಾಷಿಂಗ್ಟನ್ : ಅಮೆರಿಕದಲ್ಲಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾರತ ಹೈದರಾಬಾದ್ ಮೂಲದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕಿಡಾದ ಘಟನೆ ಸೋಮವಾರ ನಡೆದಿದೆ.

ಗ್ರೀನ್ ಕೌಂಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಹೈದರಾಬಾದ್ ಮೂಲದ ತೇಜಸ್ವಿನಿ,  ಶ್ರೀ ವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅಮೆರಿಕದ ಡಲ್ಲಾಸ್‌ನಲ್ಲಿ ವಾಸವಿದ್ದ ಕುಟುಂಬವು ರಜೆಯ ನಿಮಿತ್ತ ಕಳೆದ ವಾರ ಅಟ್ಲಾಂಟಾದಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿತ್ತು.

ಸೋಮವಾರ ಅಟ್ಲಾಂಟಾದಿಂದ ಡಲ್ಲಾಸ್‌ಗೆ ಹಿಂತಿರುಗುತ್ತಿದ್ದ ವೇಳೆ ಟ್ರಕ್, ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಗುರುತುಗಳನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಪತ್ತೆ ಮಾಡಿದ ಬಳಿಕ ಮೃತರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ‘ನಿದ್ರಾದೇವಿ Next Door’ ಚಿತ್ರದ ರೊಮ್ಯಾಂಟಿಕ್ ಸಾಂಗ್ ರಿಲೀಸ್​​.. ಚಿತ್ರತಂಡಕ್ಕೆ ಗೋಲ್ಡನ್ ಸ್ಟಾರ್ ಸಾಥ್​​!

Btv Kannada
Author: Btv Kannada

Read More