ಮಂಗಳೂರು : ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರನ ಲವ್, ಸೆಕ್ಸ್, ದೋಖಾ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಪಿ.ಜಿ. ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ರಾವ್ ಯುವತಿಯೋರ್ವಳನ್ನು ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ ಯುವತಿ ಗರ್ಭಿಣಿ ಆಗುತ್ತಿದ್ದಂತೆ ಶ್ರೀಕೃಷ್ಣ ರಾವ್ ಆಕೆಯನ್ನು ಮದುವೆಯಾಗಲು ನಿರಾಕರಿಸಿ ನಾಪತ್ತೆಯಾಗಿದ್ದ. ಈ ಘಟನೆ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿತ್ತು. ಇದೀಗ ಪಿ.ಜಿ. ಜಗನ್ನಿವಾಸ್ ರಾವ್ಗೆ ಬಿಜೆಪಿ ಶಿಸ್ತು ಕ್ರಮದ ಎಚ್ಚರಿಕೆಯ ನೋಟಿಸ್ ನೀಡಿದೆ.

ಈ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾಗಿದೆ, ನಿಮ್ಮ ಮಗ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿ ವಂಚನೆ ಮಾಡಿರುವ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗುತ್ತಿದೆ. ಸಂತ್ರಸ್ತೆಯ ಪೋಷಕರು ನೀವು ನ್ಯಾಯಸಮ್ಮತವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ತಾವು ಪಕ್ಷದಲ್ಲಿದ್ದು ನ್ಯಾಯಯುತವಾಗಿ, ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿತ್ತು.

ಸಂತ್ರಸ್ತೆ ಯುವತಿಗೆ ನ್ಯಾಯ ಒದಗಿಸಿಕೊಡಬೇಕು, ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ನಿಮ್ಮ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಕ್ಷಣವೇ ಉತ್ತರಿಸಬೇಕು ಎಂದು ಪಿ.ಜಿ. ಜಗನ್ನಿವಾಸ್ ರಾವ್ಗೆ ಬಿಜೆಪಿ ಎಚ್ಚರಿಕೆಯ ನೋಟಿಸ್ ನೀಡಿದೆ.
ಇದನ್ನೂ ಓದಿ : ಚಿನ್ನಸ್ವಾಮಿ ಕಾಲ್ತುಳಿತಕ್ಕೆ KSCA, ಪೊಲೀಸರ ನಿರ್ಲಕ್ಷ್ಯವೇ ಕಾರಣ? – ಶೀಘ್ರದಲ್ಲಿ ಸರ್ಕಾರಕ್ಕೆ ತನಿಖಾಧಿಕಾರಿ DC ಜಗದೀಶ್ ವರದಿ ಸಲ್ಲಿಕೆ!







