ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಹೈಕೋರ್ಟ್ ತಡೆ!

ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿಗಳ  ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ  ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಸೂಚನೆ ನೀಡಿದೆ.

ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.

ಇದನ್ನೂ ಓದಿ : ಬಿಜೆಪಿ ಮುಖಂಡನ ಪುತ್ರನ ಲವ್, ಸೆಕ್ಸ್, ದೋಖಾ ಕೇಸ್.. ಮದುವೆಯಾಗಲು ನಿರಾಕರಿಸಿದ ಆರೋಪಿ – ಆತಂಕದಲ್ಲಿ ಸಂತ್ರಸ್ತೆ ತಾಯಿ!

Btv Kannada
Author: Btv Kannada

Read More