ನಾಳೆ ಭಾರತ​ ಬಂದ್​ – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್!

ನವದೆಹಲಿ : ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ನಾಳೆ ಭಾರತ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.

ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ಕರ್ನಾಟಕದಲ್ಲಿ ಭಾರತ ಬಂದ್ ಎಫೆಕ್ಟ್ ಇಲ್ಲದಿದ್ದರೂ ಉತ್ತರ ಭಾರತದ ಹಲವೆಡೆ ಬಂದ್ ಆಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಳೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಮುಷ್ಕರಕ್ಕೆ ಕಾರಣವೇನು?

ಕೇಂದ್ರ ಸರ್ಕಾರದ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಕಳೆದ ವರ್ಷ ಸಲ್ಲಿಸಿದ 17 ಬೇಡಿಕೆಗಳನ್ನು ಈಡೇರಿಸದ ಕಾರಣ ಈ ಪ್ರತಿಭಟನೆ ನಡೆಯುತ್ತಿದೆ. ಬೇಡಿಕೆ ಶೀಘ್ರ ಜಾರಿಗೆ ಸರ್ಕಾರದ ಗಮನ ಸೆಳೆಯಲು ಮುಷ್ಕರಕ್ಕೆ ಸಂಘಟನೆಗಳು ಮುಂದಾಗಿವೆ.

ಈ ಬಗ್ಗೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಅಮರಜೀತ್ ಕೌರ್ ಅವರು ಬಂದ್‌ ಮಾತನಾಡಿ, ರೈತರು ಮತ್ತು ಗ್ರಾಮೀಣ ಕಾರ್ಮಿಕರು ಸಹ ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ಬಂದ್‌ನಿಂದಾಗಿ ಬ್ಯಾಂಕಿಂಗ್, ಪೋಸ್ಟಲ್, ವಿಮೆ, ಕಲ್ಲಿದ್ದಲು ಗಣಿ, ಕಾರ್ಖಾನೆ ಮತ್ತು ಸಾರಿಗೆ ಸೇವೆಗಳಲ್ಲಿ ತೊಂದರೆಯಾಗಬಹುದು ಎಂದಿದ್ದಾರೆ.

ಏನಿರುತ್ತೆ? ಏನಿರಲ್ಲ?

  • ನಾಳೆ ಕೈಗಾರಿಕೆಗಳು ಬಹುತೇಕ ಬಂದ್
  • ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ ಆಗಬಹುದು
  • ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ
  • ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ
  • ವಿಮೆ ಕಚೇರಿ ಬಂದ್ ಸಾಧ್ಯತೆ
  • ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್
  • ಪೋಸ್ಟ್ ಆಫೀಸ್ ಇರಲಿದೆ

ಇದನ್ನೂ ಓದಿ : ಭ್ರಷ್ಟ ಅಧಿಕಾರಿ ಕೆ.ಸಿ.ಜಯರಾಮಯ್ಯ ವಿರುದ್ಧ ಒಂದೇ ಮಾತರಂ ಸರ್ವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಎಂ ಶಿವಕುಮಾರ್ ನಾಯಕ್ ದೂರು!

Btv Kannada
Author: Btv Kannada

Read More