ಆನೇಕಲ್ : ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿರುವ ತಮ್ಮ ಸ್ನೇಹಿತನ ಮನೆಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಮಹಿಳೆ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್ನಿಂದ ಹಣ ಹಾಕಿಸಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಸಾಮಿಗಳು ಇಬ್ಬರ ಮೊಬೈಲ್ ಕಸಿದುಕೊಂಡಿದ್ದು, ಸಾಲದ್ದಕ್ಕೆ ಮನೆಯಲ್ಲಿದ್ದ ಫ್ರಿಡ್ಜ್, ವಾಷಿಂಗ್ ಮೆಷಿನ್ ಹೊತ್ತೊಯ್ದಿದ್ದಾರೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ‘ಜೋಗತಿ’ಯಾದ ಶ್ರೀನಗರ ಕಿಟ್ಟಿ – ವೇಷಗಳು ಚಿತ್ರದ ಟೈಟಲ್ ಟೀಸರ್ ರಿಲೀಸ್!







