ರಾಮನಗರ : ಬೆಂಗಳೂರು ಟು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪಿರುವ ಘಟನೆ ರಾಮನಗರ ತಾಲೂಕಿನ ಜಯಪುರಗೇಟ್ ಬಳಿ ನಡೆದಿದೆ.
ಈ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು, ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ ಸಚಿನ್(27) ಮೃತ ದುರ್ದೈವಿಗಳು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗ್ತಿದ್ದ ಸ್ವಿಫ್ಟ್ ಕಾರು, ಚಾಲಕನ ನಿದ್ರೆಯ ಮಂಪರಿನಿಂದ ಹೆದ್ದಾರಿಯಲ್ಲಿನ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ತಮಿಳುನಾಡು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಬೆಂಕಿ ಅವಘಡ!
Author: Btv Kannada
Post Views: 1,951







