ಬೈಕ್‌ಗೆ ಡಿಕ್ಕಿಯಾಗಿ ಕಾಲುವೆಗೆ ಉರುಳಿ ಬಿದ್ದ ಕಾರು – 7 ಮಂದಿ ಸಾವು!

ಮುಂಬೈ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಎರಡು ವರ್ಷದ ಮಗು ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ.

ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ಪಕ್ಕದಲ್ಲಿದ್ದ ಸಣ್ಣ ಕಾಲುವೆಗೆ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸಾವಿಗೀಡಾಗಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ನಾಸಿಕ್ ನಗರದಲ್ಲಿ ಸಂಬಂಧಿಕರೊಬ್ಬರ ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗಿಯಾಗಿ ವಾಪಸ್‌ ಆಗುತ್ತಿದ್ದರು. ಈ ವೇಳೆ ಬೈಕ್‌ಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಸಣ್ಣ ಕಾಲುವೆಗೆ ಕಾರು ಉರುಳಿ ಬಿದ್ದಿದೆ.

ಕಾಲುವೆಗೆ ಕಾರು ಬೀಳುತ್ತಿದ್ದಂತೆ ಕಾರಿನೊಳಗೆ ನೀರು ತುಂಬಿದೆ. ಇದರಿಂದ ಒಳಗೆ ಸಿಲುಕಿಕೊಂಡ ಪ್ರಯಾಣಿಕರು ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಆ್ಯಂಕರ್ ಅನುಶ್ರೀ ಫ್ಯಾನ್ಸ್​ಗೆ ಗುಡ್​ನ್ಯೂಸ್.. ಕೊನೆಗೂ ಹಸೆಮಣೆ ಏರಲು ಸಜ್ಜಾದ ಕರಾವಳಿ ಬೆಡಗಿ – ಆ.28ಕ್ಕೆ ಅದ್ಧೂರಿ ಮದುವೆ!

Btv Kannada
Author: Btv Kannada

Read More