ಚಿತ್ರರಂಗಕ್ಕೆ ಗಣಿದಣಿ ಪುತ್ರ ಕಿರೀಟಿ ಗ್ರ್ಯಾಂಡ್‌ ಎಂಟ್ರಿ – ಇಂದು ದೇಶಾದ್ಯಂತ ‘ಜೂನಿಯರ್‌’ ಸಿನಿಮಾ ರಿಲೀಸ್‌!

ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟನೆಯ ಚೊಚ್ಚಲ ಸಿನಿಮಾ ‘ಜೂನಿಯರ್‌’ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಇಂದು ಅದ್ದೂರಿಯಾಗಿ ರಿಲೀಸ್​​ ಆಗಲಿದೆ. ಬೆಂಗಳೂರಿನ ಗಾಂಧಿನಗರ ಸೇರಿ 1116ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ‘ಜೂನಿಯರ್‌’ ಅಬ್ಬರ ಶುರುವಾಗಿದ್ದು, ಮೊದಲ ಸಿನಿಮಾದಲ್ಲೇ ಕಿರೀಟಿಗೆ ಅದ್ದೂರಿ ಸ್ವಾಗತ ಕೋರಲು ಅಭಿಮಾನಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.

ಇಡೀ ಗಾಂಧಿನಗರದಲ್ಲಿ ಕಿರೀಟಿ ಹವಾ ಸೃಷ್ಟಿಯಾಗಿದ್ದು, ಸಿನಿಪ್ರಿಯರು ಸಾವಿರಾರು ಸಂಖ್ಯೆಯಲ್ಲಿ ಸಿನಿಮಾ ನೋಡಲು ಥೀಯೇಟರ್​ ಬಳಿ ಬರುತ್ತಿದ್ದಾರೆ. ಈ ಸಿನಿಮಾದಲ್ಲಿ ಕಿರೀಟಿಗೆ ಜೋಡಿಯಾಗಿ ಶ್ರೀಲೀಲಾ ನಟಿಸಿದ್ದು, ಇವರಿಬ್ಬರ ಕಾಂಬಿನೇಷನ್‌ನ ‘ವೈರಲ್ ವೈಯಾರಿ’ ಈಗಾಗಲೇ ಹಾಡು ಟ್ರೆಂಡ್ ಆಗಿದೆ.

ಪಂಚ ಭಾಷೆಯಲ್ಲಿ ರಿಲೀಸ್.. ಕಿರೀಟಿ ರೆಡ್ಡಿ ಮೊದಲ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗಿರುವುದು ವಿಶೇಷ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಜೂನಿಯರ್ ಸಿನಿಮಾ ರಿಲೀಸ್ ಆಗಲಿದೆ. ‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಜೂನಿಯರ್ ಸಿನಿಮಾ ತಯಾರಾಗಿದೆ.

ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ‌ ಮೂಡಿ ಬಂದಿದೆ.

ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್. ಹೌದು.. ‘ಕ್ರೇಜಿಸ್ಟಾರ್’ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಚ್ಯುತ್ ಕುಮಾರ್, ಸುಧಾರಾಣಿ ಜೂನಿಯರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಿರೀಟಿಗೆ ಜೋಡಿಯಾಗಿ ನಟಿ ಶ್ರೀಲೀಲಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನೂ ಹಲವು ತಾರೆಯರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಜೂನಿಯರ್ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.

ಇದನ್ನೂ ಓದಿ : ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಿ – ಸಿಎಂಗೆ ಅಳಿಯ ಅನಿರುದ್ಧ್ ಮನವಿ!

Btv Kannada
Author: Btv Kannada

Read More