ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರೋ ಘಟನೆ ಪೀಣ್ಯ 2ನೇ ಹಂತದಲ್ಲಿ ನಡೆದಿದೆ.
ಘಟಕ 22ಕ್ಕೆ ಸೇರಿದ KA.51,4170 ನಂಬರ್ ಬಸ್ ಡ್ರೈವರ್ ಮತ್ತು ಕಂಡಕ್ಟರ್ ನಡುವೆ ಜಗಳವಾಗಿದ್ದು, ಈ ವೇಳೆ ಕಂಡಕ್ಟರ್ ರಮೇಶ್ ಬಸ್ ಚಲಾಯಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ, ಫುಟ್ಪಾತ್ ಏರಿ ಕ್ಯಾಂಟೀನ್ಗೆ ಡಿಕ್ಕಿಯಾಗಿದೆ. ಬಸ್ ಗುದ್ದಿದ ರಭಸಕ್ಕೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಪೀಣ್ಯ 2ನೇ ಹಂತದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದ್ದು, ಬಸ್ ಚಾಲಕ-ಕಂಡಕ್ಟರ್ ಬೇಜಬ್ದಾರಿಯೇ ಈ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನು, ಅಪಘಾತದಲ್ಲಿ ಐದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಸದ್ಯ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಸಿದ್ದಾಪುರದಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಯಶಸ್ವಿ!







