ಕಾರವಾರ : ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ (ಜು.18) ದೂರು ದಾಖಲಿಸಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನಂತ ಕುಮಾರ್ ಹೆಗಡೆ ಅವರಿಗೆ ಈ ಹಿಂದೆ ಸಹ ಜೀವ ಬೆದರಿಕೆ ಸಂದೇಶ ಬಂದಿತ್ತು.
ಶಿರಸಿ ಮಾರುಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಇ-ಮೇಲ್ನ ಮೂಲ, ಕಳುಹಿಸಿದ ವ್ಯಕ್ತಿಯ ನಂಬುಗೆಯ ಮಾಹಿತಿಯನ್ನು ಗುರುತಿಸಲು ತಾಂತ್ರಿಕ ಸಹಾಯದಿಂದ ತನಿಖೆ ಚುರುಕುಗೊಳಿಸಲಾಗಿದೆ.
ಇದನ್ನೂ ಓದಿ : ಲೋಕಾಯುಕ್ತ ಹೆಸರಲ್ಲಿ ವಂಚನೆ – ಶ್ರೀನಾಥ್ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ನ್ಯಾಯಾಲಯ!
Author: Btv Kannada
Post Views: 1,125







