ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ – ಇಂದು ಭಾರೀ ಮಳೆ ಸಾಧ್ಯತೆ.. ಶಾಲಾ-ಕಾಲೇಜುಗಳಿಗೆ ರಜೆ!

ಮಂಗಳೂರು : ಕರ್ನಾಟಕದಲ್ಲಿ ಜುಲೈ 27ರವರೆಗೂ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಇಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ಜ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇನ್ನೂ ಕರಾವಳಿ ಭಾಗಗಳಲ್ಲಿ ಮಳೆ ಅರ್ಭಟ ಹೆಚ್ಚಾಗುತ್ತಿದ್ದು, ಬೆಟ್ಟಗುಡ್ಡ ಹಾಗೂ ನದಿ ಪಾತ್ರದ ಜನರಲ್ಲಿ ಮತ್ತೆ ಅತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಡುವೆ ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ : WWE ಸೂಪರ್​ ಸ್ಟಾರ್​​​ ಹಲ್ಕ್ ಹೋಗನ್ ಹೃದಯಾಘಾತದಿಂದ ನಿಧನ.. ಫ್ಯಾನ್ಸ್‌ಗೆ ಆಘಾತ!

Btv Kannada
Author: Btv Kannada

Read More