ಮಡಿಕೇರಿ : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ದಕ್ಷಿಣ ಕನ್ನಡದ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ – ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ!
Author: Btv Kannada
Post Views: 1,913







