ಕಾಂಗ್ರೆಸ್​ ಸೋತಾಗ EVM, ಚುನಾವಣಾ ಆಯೋಗದ ಮೇಲೆ ಅನುಮಾನ ಬರುತ್ತೆ – ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು!

ದೆಹಲಿ : ದೇಶದಲ್ಲಿ ಈಗ 2024ರ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿವೆ. ಕೇಂದ್ರದ ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ಚುನಾವಣೆಯಲ್ಲಿ ಗೆದ್ದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.  ರಾಹುಲ್ ಗಾಂಧಿ  ಆರೋಪಕ್ಕೆ ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್ ಸೋತಾಗ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಅನುಮಾನಿಸಲು ಪ್ರಾರಂಭಿಸುತ್ತಾರೆ, ಜೊತೆಗೆ ಇವಿಎಂಗಳನ್ನು ಪ್ರಶ್ನಿಸುತ್ತಾರೆ, ಏಕೆಂದರೆ ಆಳವಾಗಿ, ಅವರು ತಮ್ಮ ಬಗ್ಗೆಯೇ ಅನುಮಾನಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್​ನವರಿಗೆ ಚುನಾವಣೆಯಲ್ಲಿ ಸೋತಾಗಲೆಲ್ಲಾ EVM, ಚುನಾವಣಾ ಆಯೋಗ ಸೇರಿ ಎಲ್ಲರ ಮೇಲೂ ಅನುಮಾನ ಬರುತ್ತದೆ. ಅದೇ 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆ ಗೆದ್ದಾಗ ಇದೆಲ್ಲಾ ಸರಿಯಾಗಿತ್ತಾ ಎಂದು ರಾಹುಲ್​ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್​ ಕೊಟ್ಟಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ರು ಚುನಾವಣಾ ಅಕ್ರಮ ಬಗ್ಗೆ ಅವರನ್ನು ಕೇಳಿ. ಕರ್ನಾಟಕದಲ್ಲಿ ಎಲ್ಲಾ ಅಧಿಕಾರಿಗಳನ್ನು ಮುಖ್ಯಮಂತ್ರಿಗಳೇ ನಿಯೋಜಿಸಿರುತ್ತಾರೆ ಹಾಗಾಗಿ ರಾಹುಲ್​ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕೇಳಬೇಕು. ಕಾಂಗ್ರೆಸ್​ನವರಿಗೆ ಸ್ವತಃ ಅವರ ಮೇಲೆ ನಂಬಿಕೆ ಇಲ್ಲ ಅನುಮಾನ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಕಾರು-ಲಾರಿ ನಡುವೆ ಭೀಕರ ಅಪಘಾತ – ಇಬ್ಬರು ಸಾವು!

Btv Kannada
Author: Btv Kannada

Read More