ಬಿಗ್​ಬಾಸ್​ ಪ್ರಥಮ್ ಮೇಲೆ ಮಾರಕಾಸ್ತ್ರಗಳಿಂದ ​ಹಲ್ಲೆಗೆ ಯತ್ನ – ಬಾಸ್‌ ಬಗ್ಗೆ ಮಾತಾಡ್ತೀಯಾ ಎಂದು ಕಿಡಿಗೇಡಿಗಳಿಂದ ಅವಾಜ್‌!

ಬಿಗ್​ಬಾಸ್ ವಿನ್ನರ್, ಕನ್ನಡ ನಟ ‘ಒಳ್ಳೇ ಹುಡುಗ’ ಖ್ಯಾತಿಯ ಪ್ರಥಮ್​​ಗೆ ಜೀವಬೆದರಿಕೆ ಬಂದಿರುವ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಈ ಸುದ್ದಿ ವೈರಲ್ ಅಗುತ್ತಿದ್ದು, ಈ ಕುರಿತ ಇನ್ನಷ್ಟು ಮಾಹಿತಿ ಇನ್ನಷ್ಟೇ ಹೊರ ಬರಬಬೇಕಿದೆ.

ಚಿತ್ರೀಕರಣಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ನಟ ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ. ಈ ಕುರಿತು ಪ್ರಥಮ್‌ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್‌ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದಾರೆ.

ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಡ್ರ್ಯಾಗರ್ ತೋರಿಸಿ  ಹಲ್ಲೆಗೆ ಯತ್ನಿಸಿ ಅವಾಚ್ಛವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡ ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದಾರೆ. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಸ್ಪಿ ಸಿಕೆ ಬಾಬಾ ಅವರು, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ.. ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ!

Btv Kannada
Author: Btv Kannada