ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 20 ವಾಹನಗಳ ನಡುವೆ ಭೀಕರ ಅಪಘಾತ – ಓರ್ವ ಸಾವು, 20 ಮಂದಿಗೆ ಗಾಯ!

ಮುಂಬೈ : ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸುಮಾರು 20 ವಾಹನಗಳು ಅಪಘಾತಕ್ಕೀಡಾಗಿವೆ. 20ಕ್ಕೂ ಹೆಚ್ಚು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ.

ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಬೈಗೆ ಹೋಗುವ ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಬರುವಾಗ ಕಂಟೇನರ್‌ ಟ್ರಕ್‌ನ ಬ್ರೇಕ್‌ ಫೇಲ್‌ ಆಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಟ್ರಕ್‌ ಮುಂದೆ ಸಾಗುತ್ತಿದ್ದ BMW ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಮುಂಬೈ ಲೇನ್‌ನ ಹೊಸ ಸುರಂಗ ಮಾರ್ಗದಿಂದ ಫುಡ್ ಮಾಲ್ ಹೋಟೆಲ್ ಪ್ರದೇಶದವರೆಗೆ ಅಪಘಾತ ಸಂಭವಿಸಿದೆ. ಈವರೆಗೆ ಓರ್ವ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಕೆಲ ವಾಹನಗಳಂತೂ ಸಂಪೂರ್ಣ ಚಿಂದಿಯಾಗಿವೆ. ಗಾಯಗೊಂಡವರನ್ನ ನವಿ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಬಳಿಕ ಅಪಘಾತಕ್ಕೆ ಕಾರಣವಾದ ಟ್ರಕ್‌ ಚಾಲಕನನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ : ಡಾರ್ಲಿಂಗ್ ಕೃಷ್ಣ ನಟನೆಯ ಬ್ರ್ಯಾಟ್ ಚಿತ್ರದ ‘ನಾನೇ ನೀನಂತೆ’ ಹಾಡಿಗೆ ಮೆಚ್ಚುಗೆಯ ಸುರಿಮಳೆ!

Btv Kannada
Author: Btv Kannada

Read More