ಚಿಕ್ಕಮಗಳೂರು : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ವರಣಾರ್ಭಟದಿಂದಾಗಿ ಹಲವೆಡೆ ಅವಾಂತರಗಳು ಸಂಭವಿಸುತ್ತಿದೆ. ಇನ್ನು ಮಲೆನಾಡಲ್ಲೂ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಗಾಳಿ ಸಹಿತ ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿದೆ.

ಮರ ಧರೆಗುರಳಿದ್ದರಿಂದ ವಿದ್ಯುತ್ ಕಂಬಕ್ಕೂ ಹಾನಿ ಉಂಟಾಗಿದ್ದು, ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಚಿಕ್ಕಮಗಳೂರು-ಮತ್ತೋಡಿ ಮಾರ್ಗ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಮರ ತೆರವುಗೊಳಿಸಲು ಪೊಲೀಸರು, ಮೆಸ್ಕಾಂ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಕಾರ್ಯಾಚರಣೆಕ್ಕೆ ಅಡ್ಡಿಯಾಗುತ್ತಿದ್ದು, ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗ್ಬೇಕು ಅನ್ನೋದಕ್ಕೆ ಇದೇ ಸಾಕ್ಷಿ – ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಕಿಡಿ!
Author: Btv Kannada
Post Views: 853







