ಅಮೆರಿಕ ಏರ್‌ಲೈನ್ಸ್ ವಿಮಾನವು ಟೇಕಾಫ್ ಆದ ಕೆಲಹೊತ್ತಿನಲ್ಲೇ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ತಕ್ಷಣ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದ್ದು, 173 ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ.

ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (DEN) ಅಮೆರಿಕನ್ ಏರ್ಲೈನ್ಸ್ ವಿಮಾನದ ಎಡಭಾಗದ ಮುಖ್ಯ ಲ್ಯಾಂಡಿಂಗ್ ಗೇರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಮಿಯಾಮಿಗೆ ತೆರಳುತ್ತಿದ್ದ AA3023 ವಿಮಾನವು ಟೇಕಾಫ್ ಆದ ಸ್ವಲ್ಪ ಸಮಯದ ನಂತರ ರನ್‌ವೇಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿತು. ವಿಮಾನದ ಕೆಳಗೆ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತುರ್ತು ಸ್ಲೈಡ್‌ಗಳ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಪ್ರಯಾಣಿಕರು ಗಾಬರಿಯಿಂದ ತುತ್ತು ಬಾಗಿಲಿನಿಂದ ಜಾರುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೈಲಟ್ ಹಾಗೂ ವಿಮಾನ ಸಿಬ್ಬಂದಿಯ ಜಾಗೃತೆಯಿಂದ ಅನಾಹುತ ತಪ್ಪಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಬೈಕ್ ಮೇಲೆ ಹತ್ತಿದ ಮಿನಿ ಕ್ಯಾಂಟರ್ – ಪ್ರಾಣಾಪಾಯದಿಂದ ಮಹಿಳೆ ಜಸ್ಟ್ ಮಿಸ್!







