ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತ ನಗರ ಪೊಲೀಸರು ವಿವಿಧೆಡೆ ದಿಢೀರ ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರ ನೇತ್ರತ್ವದಲ್ಲಿ ನಡೆಸಿದ ಕಾರ್ಯಚರಣೆಯಲ್ಲಿ ಗಾಂಜ ಸೇವಿದ 26 ಜನ ಪತ್ತೆಯಾಗಿದ್ದು, ಒಬ್ಬಮಾರಟಗಾರನ್ನು ಪತ್ತೆ ಹಚ್ಚಲಾಗಿದೆ.

ಮಂಡಿ ಮೊಹೊಲ್ಲಾ, ಉದಯಗಿರಿ ಎನ್ಆರ್ ಮೊಹೊಲ್ಲಾ, ನಜರ್ ಬಾದ್ ಕೆಆರ್ ಮೊಹೊಲ್ಲಾ ಸೇರಿ ಹಲವು ಕಡೆ ಏಕ ಕಾಲಕ್ಕೆ ಕಾರ್ಯಚರಣೆ ನಡೆಸಿ ಸುಮಾರು 59 ಗೋದಾಮುಗಳನ್ನು ಪರಿಶೀಲಿಸಲಾಗಿದೆ. ಗಾಂಜಾ ಮಾರಾಟ ಪ್ರಕರಣದ ಹಿನ್ನೆಲೆಯುಳ್ಳ 35 ಜನರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ.

ನಿನ್ನೆ ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್ ಬರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು, ಹೊರವಲಯದ ರಿಂಗ್ ರಸ್ತೆ ಬಳಿ ಇರುವ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಕೆಗೆ ಬಳಕೆ ಮಾಡಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಿದ್ದರು.







