ಮಾಸ್ಕೋ : ರಷ್ಯಾದ ಕರಾವಳಿ ಪ್ರದೇಶದಲ್ಲಿ 8.8 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಇದು 1952ರ ಬಳಿಕ ಸಂಭವಿಸಿದ ಅತೀ ಪ್ರಬಲ ಭೂಕಂಪವಾಗಿದ್ದು, ಅಮೆರಿಕದ ಅಲಾಸ್ಕಾದ ಭಾಗಗಳು ಹಾಗೂ ಜಪಾನ್‌ಗೆ ಸುನಾಮೆ ಎಚ್ಚರಿಕೆ ನೀಡಲಾಗಿದೆ.

ಇಲ್ಲಿನ ಪೂರ್ವ ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. 19ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದು, 4 ಮೀಟರ್ (13 ಅಡಿ) ವರೆಗಿನ ಸುನಾಮಿ ಅಪ್ಪಳಿಸಿದೆ.

ಅಮೆರಿಕದ ಅಧಿಕಾರಿಗಳು ಅಲಾಸ್ಕಾದ ಭಾಗಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಜಪಾನ್‌ನ ಹವಾಮಾನ ಇಲಾಖೆಯು ಅಲರ್ಟ್ ಆಗಿದೆ. ಕಮ್ಚಟ್ಕಾದ ಕೆಲವು ಭಾಗಗಳಲ್ಲಿ 3-4 ಮೀಟರ್ (10-13 ಅಡಿ) ಎತ್ತರದ ಸುನಾಮಿ ದಾಖಲಾಗಿರುವುದಾಗಿ ಪ್ರಾದೇಶಿಕ ಸಚಿವ ಸೆರ್ಗೆಯ್ ಲೆಬೆಡೆವ್ ತಿಳಿಸಿದ್ದಾರೆ.

ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು 19.3 ಕಿಮೀ (12 ಮೈಲುಗಳು) ಆಳದಲ್ಲಿ ಪತ್ತೆಯಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ರಷ್ಯಾದ ಬಳಿ ಸಂಭವಿಸಿದ ಪ್ರಬಲ ಭೂಕಂಪದ ಕಾರಣ, ಜಪಾನ್ ದೇಶದಲ್ಲೂ ಸುನಾಮಿ ಎಚ್ಚರಿಕೆ ನೀಡಿದೆ. ಒಂದು ಮೀಟರ್ ಎತ್ತರದ ಅಲೆಗಳು ಜಪಾನ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ರಷ್ಯಾದಲ್ಲಿ ಸಂಭವಿಸಿದ ಭೂಕಂಪದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ಯ ವ್ಯಾಪಕ ಸದ್ದು ಮಾಡ್ತಿದೆ.
ಇದನ್ನೂ ಓದಿ : ಚುನಾವಣಾ ಆಯೋಗದ ವಿರುದ್ಧ ‘ಕೈ’ ಸಮರ.. ಆ.4ರಂದು ಮಹದೇವಪುರದಲ್ಲಿ ರಾಹುಲ್ ಗಾಂಧಿ ಬೃಹತ್ ಪ್ರತಿಭಟನೆ!







