ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿನ್ನೆ ಮಹತ್ವದ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ಪರಿಗಣಿಸಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಇದೀಗ ಜೈಲು ಸೇರಿರುವ ಪ್ರಜ್ವಲ್ ರೇವಣ್ಣಗೆ 15528 ಖೈದಿ ನಂಬರ್ ನೀಡಿದ್ದು, ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಪ್ರಜ್ವಲ್ ರೇವಣ್ಣಗೆ ಸಜಾಬಂಧಿ ಖೈದಿ ನಂಬರ್ ನೀಡಿದ್ದಾರೆ.
ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದ ಅತ್ಯಾಚಾರದ ಅಪರಾಧಿ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ಗಜನನ ಭಟ್ ಅವರಿದ್ದ ಪೀಠ ಜೀವಾವಧಿ ಶಿಕ್ಷೆ ನೀಡುವ ಮೂಲಕ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್‌ಗೆ ಭಾರತೀಯ ದಂಡ ಸಂಹಿತೆ (IPC Section) 376(2)k ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೂ ಸೆಕ್ಷನ್ 376(2)n ಅಡಿಯಲ್ಲಿ ಜೀವನ ಪರ್ಯಾಂತ ಶಿಕ್ಷೆ ವಿಧಿಸಿದೆ. ಮಾತ್ರವಲ್ಲ, ಅಡಿಯಲ್ಲಿ 376(2)n ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಡಿಯಲ್ಲೂ ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ : ವರ್ತೂರ್ ಪ್ರಕಾಶ್ ಕಿಡ್ನ್ಯಾಪ್ ಕೇಸ್ – ಭೂಗತ ಪಾತಕಿ ರವಿ ಪೂಜಾರಿ ಸಹಚರ ಅರೆಸ್ಟ್!







