ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರ ಮೇಲೆ ಬಿದ್ದಿದೆ.

ಹೌದು.. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಬಂದ್ಗೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಬಸ್ಗಳು ಸಿಗೋದಿಲ್ಲ ಅನ್ನೋ ಕಾರಣಕ್ಕೆ ಪ್ರಯಾಣಿಕರು ನಮ್ಮ ಮೆಟ್ರೋ ಕಡೆ ಮುಖ ಮಾಡಿದ್ದಾರೆ.

ಮೆಜೆಸ್ಟಿಕ್ನಲ್ಲಿ ನಮ್ಮ ಮೆಟ್ರೋ ನಿಲ್ದಾಣದ ಮುಂದೆ ಸರತಿ ಸಾಲಿನಲ್ಲಿ ಪ್ರಯಾಣಿಕರು ನಿಂತುಕೊಂಡಿದ್ದಾರೆ. ಪ್ರತಿನಿತ್ಯ ನಮ್ಮ ಮೆಟ್ರೋದಲ್ಲಿ ಅಂದಾಜು 8 ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ಆದ್ರೆ ಇಂದು ಸಾರಿಗೆ ನೌಕರರ ಮುಷ್ಕರದಿಂದ ಆ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಆಯೋಜನೆ ಮಾಡಲಾಗಿದೆ.
ಇದನ್ನೂ ಓದಿ : 10,12 ವರ್ಷದ ಬಾಲಕಿಯರ ಕಳೇಬರ ಪತ್ತೆ.. ಧರ್ಮಸ್ಥಳ ಗ್ರಾಮದಲ್ಲಿ ಸಿಕ್ಕಿದ್ದು ಒಂದಲ್ಲ, ಎರಡಲ್ಲ ಬರೋಬ್ಬರಿ 9 ಅಸ್ಥಿಪಂಜರ!







