ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆ ಸಮಾರಂಭಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ಆಹ್ವಾನಿಸದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮೋದಿ ಕಾರ್ಯಕ್ರಮಕ್ಕೆ ಆರ್ ಅಶೋಕ್ ಅವರಿಗೆ ಆಹ್ವಾನ ನೀಡಲಾಗಿದೆ.
ಪ್ರಧಾನಿ ಕಚೇರಿ ಜೊತೆ ಚರ್ಚಿಸಿ ಆರ್. ಅಶೋಕ್ ಹೆಸರನ್ನು ಕೊನೆಯ ಕ್ಷಣದಲ್ಲಿ ಸೇರಿಸಲಾಗಿದೆ. ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವೇದಿಕೆಯ ಮೇಲೆ ಯಾರು ಇರಬೇಕು ಎಂಬುದನ್ನು ಪ್ರಧಾನಿ ಕಚೇರಿಯೇ ನಿರ್ಧರಿಸುತ್ತದೆ. ಅಶೋಕ್ ಅವರ ಹೆಸರನ್ನು ಮೊದಲಿಗೆ ಕೈಬಿಡಲಾಗಿತ್ತು. ಆದರೆ ಈಗ ಅದನ್ನು ಸೇರಿಸಲಾಗಿದೆ. ನಾನು ಕೂಡ ಈ ಬಗ್ಗೆ ಮೋದಿ ಕಚೇರಿಯನ್ನು ಸಂಪರ್ಕಿಸಿದ್ದೆ ಎಂದು ಸ್ಪಷ್ಟಪಡಿಸಿದರು.
ಗವರ್ನರ್ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅಶ್ವಿನಿ ವೈಷ್ಣವ್, ವಿ ಸೋಮಣ್ಣ, ಶೋಭಾ ಕರಂದ್ಲಾಜೆ, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತು ವಿಜಯೇಂದ್ರಗೆ, ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳುವ ಅವಕಾಶ ನೀಡಲಾಗಿದೆ.
ಇದನ್ನೂ ಓದಿ : ಒಕ್ಕಲಿಗ ಸಮುದಾಯದ ಅವಹೇಳನ – ಕೆಪಿಸಿಸಿ ವಕ್ತಾರರಾಗಿದ್ದ ಜಿ.ವಿ. ಸೀತಾರಾಮು ಉಚ್ಚಾಟನೆ!







