ಬೆಂಗಳೂರು : ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು-ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ನರೇಂದ್ರ ಮೋದಿ ಬೆಂಗಳೂರಿನ HAL ಏರ್ಪೋರ್ಟ್ಗೆ ಬಂದಿಳಿದಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ಹಸಿರು ನಿಶಾನೆ ತೋರಿಸಲಿದ್ದಾರೆ.

ಇಂದು ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಎಚ್‌ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಮೋದಿಯವರನ್ನು ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್, ಪೊಲೀಸ್ ಮಹಾ ನಿರ್ದೇಶಕ ಸಲೀಂ ಸೇರಿದಂತೆ ಮತ್ತಿತರರು ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಬೆಳಗ್ಗೆ 11.45ಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ನಂತರ ಆರ್.ವಿ.ರಸ್ತೆಯ(ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ 12.55ಕ್ಕೆ ಪ್ರಯಾಣಿಸಲಿದ್ದಾರೆ.

ಬಳಿಕ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ 1 ಗಂಟೆಗೆ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಆ ತರುವಾಯ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಇದೀಗ ಮೋದಿ ಉದ್ಘಾಟಿಸುತ್ತಿರುವ 19.15 ಕಿ.ಮೀ.ಉದ್ದದ ನಮ್ಮ ಮೆಟ್ರೋದ ಹಳದಿ ಮಾರ್ಗವು ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವೆ ಸಂಚರಿಸಲಿದೆ. 16 ನಿಲ್ದಾಣಗಳನ್ನು ಹೊಂದಿರುವ ಈ ರೈಲು ಮಾರ್ಗಕ್ಕೆ ಒಟ್ಟು 5,056.99 ಕೋಟಿ ವೆಚ್ಚ ಮಾಡಲಾಗಿದೆ. ಇದೇ ವೇಳೆ ಮೋದಿ ಅವರು ಮೆಟ್ರೋ 3ನೇ ಹಂತದ ಯೋಜನೆಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಬೆಂಗಳೂರು : ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಹೆಸರು ಕೈ ಬಿಟ್ಟಿದ್ದಕ್ಕೆ ಭಾರೀ ಚರ್ಚೆ – ಕೊನೆ ಕ್ಷಣದಲ್ಲಿ ಆರ್. ಅಶೋಕ್ಗೆ ಆಹ್ವಾನ!







