ಬೆಂಗಳೂರಿಗರ ಬಹುದಿನದ ಕನಸು ನನಸು.. ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಆರ್​​.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದರು.

ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ್ದು, ಈ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ್​ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಡಿಸಿಎಂ ಡಿ.ಕೆ.ಶಿವಕುಮಾರ್​, ಸಂಸದರಾದ ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಉಪಸ್ಥಿತರಿದ್ದರು.

ಈ ಮಾರ್ಗಕ್ಕೆ ಒಟ್ಟು 7,616 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಆರ್‌.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವೆ ಮೂರು ಮೆಟ್ರೋ ರೈಲುಗಳು ಸಂಚಾರ ಮಾಡಲಿದ್ದು, ಮೆಟ್ರೋದ ಹಳದಿ ಮಾರ್ಗ 19.15 ಕಿಲೋ ಮೀಟರ್‌‌ ಉದ್ದವಿದೆ. ಇನ್ನು ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಇವೆ. ಆರ್.ವಿ.ರೋಡ್​, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಹೊಸೂರು ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಕೋನಪ್ಪ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ, ಬೊಮ್ಮಸಂದ್ರ.

ಇದನ್ನೂ ಓದಿ : ಡಾ.ಕೆ. ಸುಧಾಕರ್ ದಲಿತ ವಿರೋಧಿ ಎಂದು ಪೋಸ್ಟರ್ ಅಂಟಿಸಲು ಮುಂದಾದ ಪ್ರದೀಪ್ ಈಶ್ವರ್​ ಬೆಂಬಲಿಗರು!

Btv Kannada
Author: Btv Kannada

Read More