ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಪಕ್ಕ ನಿಲ್ಲಿಸಿದ್ದ ಬೈಕ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಡಿ.ಜೆ.ಹಳ್ಳಿ ಬಳಿಯ ವಿಶ್ವೇಶ್ವರಯ್ಯ ನಗರದಲ್ಲಿ ನಡೆದಿದೆ. ಆ.12ರ ರಾತ್ರಿ 2.41ರ ಸುಮಾರಿಗೆ ಘಟನೆ ನಡೆದಿದ್ದು, ಗೋಪಿ ಎಂಬುವವರ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ.

ಗೋಪಿ ಮನೆ ಪಕ್ಕವೇ ತಮ್ಮ ಹೊಸ ಬೈಕ್ ನಿಲ್ಲಿಸಿದ್ದರು. ಆದ್ರೆ ರಾತ್ರಿ ವೇಳೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೈಕ್ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ ಬೈಕ್ಗೆ ಬೆಂಕಿ ಹಾಕುವ ದೃಶ್ಯ ಸೆರೆಯಾಗಿದ್ದು, ಡಿ.ಜೆ.ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸಂಬಂಧ ಡಿ.ಜೆ.ಹಳ್ಳಿ ಠಾಣೆಗೆ ಬೈಕ್ ಮಾಲೀಕ ಗೋಪಿ ದೂರು ನೀಡಿದ್ದು, FIR ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.
ಇದನ್ನೂ ಓದಿ : ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಕೇಸಲ್ಲಿ ಮಗಳಿಗೆ ಕ್ಲೀನ್ ಚಿಟ್.. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಸಿಬಿ!
Author: Btv Kannada
Post Views: 226







