ಸುಪ್ರೀಂ ಕೋರ್ಟ್​ ತೀರ್ಪು ಬೆನ್ನಲ್ಲೇ ಪವಿತ್ರಾ ಗೌಡ ಅರೆಸ್ಟ್!

ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್​ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಆರ್​​.ಆರ್​ ನಗರ ಪೊಲೀಸರು ಪವಿತ್ರಾ ಗೌಡನನ್ನು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ಪವಿತ್ರಾ ಗೌಡನನ್ನು ಬಂಧಿಸಿದ್ದಾರೆ. ಅರೆಸ್ಟ್​ಗೂ ಮುನ್ನ ನನ್ನ ಆಯ್ಕೆ ತಾಳ್ಮೆ.. ಎಂದು ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಪೋಸ್ಟ್ ಹಂಚಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಇಂದು ನಟ ದರ್ಶನ್​, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್​ ತೀರ್ಪು ನೀಡಿದೆ.

ಇದನ್ನೂ ಓದಿ : ದರ್ಶನ್​ಗಾಗಿ ತೀವ್ರ ಹುಡುಕಾಟ – 12 ಕಡೆ ಕಾದು ಕುಳಿತಿರುವ ಪೊಲೀಸರು.. ಸಿಕ್ಕ ಕೂಡಲೇ ಅರೆಸ್ಟ್!

Btv Kannada
Author: Btv Kannada

Read More