ಜಾಮೀನು ರದ್ದು ಬೆನ್ನಲ್ಲೇ ದರ್ಶನ್ ಅರೆಸ್ಟ್ – ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ‘ದಾಸ’ನಿಗೆ ಮತ್ತೆ ಜೈಲು ವಾಸ!

ಬೆಂಗಳೂರು : ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.

ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್​ಗೆ ಇನ್ಮುಂದೆ ಜೈಲೇ ಗತಿಯಾಗಿದೆ. ದರ್ಶನ್​ನ್ನು ಪೊಲೀಸರು ವಶಕ್ಕೆ ಪಡೆದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಿದ್ದಾರೆ. ಇನ್ನು ಪೊಲೀಸರು 7 ಜನ ಆರೋಪಿಗಳ ಮೆಡಿಕಲ್​ ಟೆಸ್ಟ್​​​​​​ ಮಾಡಿಸಲಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆರೋಪಿಗಳನ್ನು ಕೋರ್ಟ್​ಗೆ ಕರೆದೊಯ್ಯಲಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂಳಲು ದೇವಸ್ಥಾನದ ಮಾಹಿತಿ ಕೇಂದ್ರ ಹೇಳ್ತಿತ್ತು – ‘INDIA TODAY’ಗೆ ಶಾಕಿಂಗ್ ವಿಷಯ ಬಿಚ್ಚಿಟ್ಟ ದೂರುದಾರ ಭೀಮ!

Btv Kannada
Author: Btv Kannada

Read More