ವಿಜಯಪುರ : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ.
ಈ ಹೇಳಿಕೆ ಧರ್ಮಗಳ ನಡುವೆ ದ್ವೇಷ ಪ್ರಚೋದಿಸುತ್ತದೆ ಎಂದು ಆರೋಪಿಸಿ ವಿಜಯಪುರ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ BNS 2023 (U/S 193, 299, 353(1)c ಮತ್ತು 353(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಹಿಂದೂ ಯುವಕ ಗವಿಸಿದ್ದಪ್ಪ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯ ಅಭಿಯಾನ ಆರಂಭಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಘೋಷಣೆ ಮಾಡಿದ್ದರು.
ಇದನ್ನೂ ಓದಿ : ಜಾಮೀನು ರದ್ದು ಬೆನ್ನಲ್ಲೇ ದರ್ಶನ್ ಅರೆಸ್ಟ್ – ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ‘ದಾಸ’ನಿಗೆ ಮತ್ತೆ ಜೈಲು ವಾಸ!
Author: Btv Kannada
Post Views: 245







